2,760 ಎಕರೆ ಭೂಸ್ವಾಧೀನ ವಿರೋಧಿಸಿ ರೈತರ ಪ್ರತಿಭಟನೆ: ಸರ್ಕಾರಕ್ಕೆ ಎಚ್ಚರಿಕೆ - Kannada global

Breaking

Sunday, October 5, 2025

2,760 ಎಕರೆ ಭೂಸ್ವಾಧೀನ ವಿರೋಧಿಸಿ ರೈತರ ಪ್ರತಿಭಟನೆ: ಸರ್ಕಾರಕ್ಕೆ ಎಚ್ಚರಿಕೆ

2,760 ಎಕರೆ ಭೂಸ್ವಾಧೀನ ವಿರೋಧಿಸಿ ರೈತರ ಪ್ರತಿಭಟನೆ: ಸರ್ಕಾರಕ್ಕೆ ಎಚ್ಚರಿಕೆ


ಬೆಂಗಳೂರು ಹೊರವಲಯದ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿ ವ್ಯಾಪ್ತಿಯಲ್ಲಿ ಕರ್ನಾಟಕ ಗೃಹ ಮಂಡಳಿ (KHB) 2,760 ಎಕರೆ ರೈತರ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ.

ಈ ನಿರ್ಧಾರವನ್ನು ವಿರೋಧಿಸಿ ಸುತ್ತಮುತ್ತಲಿನ ಐದು ಗ್ರಾಮಗಳ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರು ಬೃಹತ್ ಪಾದಯಾತ್ರೆ ನಡೆಸಿ, ಭೂಸ್ವಾಧೀನಕ್ಕೆ ಸಂಬಂಧಿಸಿದ ನೋಟಿಸ್‌ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ಮಾಡಿದ್ದಾರೆ.

ಈಗಾಗಲೇ ಹಲವು ಯೋಜನೆಗಳಿಗೆ 10,000 ಎಕರೆಗೂ ಹೆಚ್ಚು ಭೂಮಿ ಕಳೆದುಕೊಂಡಿರುವ ರೈತರು, "ಪ್ರಾಣ ಬಿಡುತ್ತೇವೆ, ಭೂಮಿ ಬಿಡೆವು" ಎಂದು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಅವರು ತಮ್ಮ ಕೃಷಿ ಭೂಮಿ ನೀಡಲು ನಿರಾಕರಿಸಿದ್ದಾರೆ.

ನಮ್ಮ WhatsApp ಗ್ರೂಪ್ ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ Instagram ಖಾತೆಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

No comments:

Post a Comment

Advertisement

ಜಾಹೀರಾತು ಹಾಗೂ ಸುದ್ದಿ ನೀಡಲು ಸಂಪರ್ಕಿಸಿ

📞 9110857339 ಗೆ ಕರೆ ಮಾಡಿ 💬 WhatsApp ಗ್ರೂಪ್ ಸೇರಿ 🎥 YouTube ಚಂದಾದಾರರಾಗಿ

ಕನ್ನಡ ಗ್ಲೋಬಲ್ ನ್ಯೂಸ್