ಬೈಂದೂರು ದುರಂತ: ಮೃತರ ಕುಟುಂಬಕ್ಕೆ ಪರಿಹಾರ - ಸಿಎಂ ಜೊತೆ ಚರ್ಚಿಸುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ - Kannada global

Breaking

Wednesday, October 15, 2025

ಬೈಂದೂರು ದುರಂತ: ಮೃತರ ಕುಟುಂಬಕ್ಕೆ ಪರಿಹಾರ - ಸಿಎಂ ಜೊತೆ ಚರ್ಚಿಸುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ

ಬೈಂದೂರು ದುರಂತ: ಮೃತರ ಕುಟುಂಬಕ್ಕೆ ಪರಿಹಾರ - ಸಿಎಂ ಜೊತೆ ಚರ್ಚಿಸುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ


ಉಡುಪಿ: ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಕೊಡೇರಿ ಹೊಸಹಿತ್ಲು ಬೀಚ್‌ನಲ್ಲಿ ಮಂಗಳವಾರ ಸಮುದ್ರದಲ್ಲಿ ಈಜಲು ತೆರಳಿ ಮೃತಪಟ್ಟ ಮೂವರು ಬಾಲಕರ ಕುಟುಂಬಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದ್ದಾರೆ.

ಹೊಸಹಿತ್ಲು ಬೀಚ್‌ನಲ್ಲಿ ನಡೆದ ಈ ದುರಂತದಲ್ಲಿ ಸಂಕೇತ್ (16), ಸೂರಜ್ (15), ಮತ್ತು ಆಶಿಶ್ (14) ಎಂಬ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಘಟನೆ ಬಗ್ಗೆ ಮಾಹಿತಿ ಪಡೆದ ತಕ್ಷಣ ಪ್ರತಿಕ್ರಿಯಿಸಿದ ಸಚಿವರು, ಮೃತರ ಕುಟುಂಬಸ್ಥರಿಗೆ ಸೂಕ್ತ ಪರಿಹಾರ ನೀಡುವ ಬಗ್ಗೆ ಭರವಸೆ ನೀಡಿದ್ದಾರೆ.

"ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಸಾವಿನ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ನೀಡಲಿ" ಎಂದು ಸಚಿವರು ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಜಿಲ್ಲೆಯಲ್ಲಿ ಇಂತಹ ದುರ್ಘಟನೆಗಳು ಮರುಕಳಿಸದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಎಚ್ಚರಿಕೆ ವಹಿಸಬೇಕು ಎಂದು ಅವರು ಸೂಚನೆ ನೀಡಿದ್ದಾರೆ.

ಸಂಸದ ಬಿ.ವೈ. ರಾಘವೇಂದ್ರ ಸಂತಾಪ:

ಈ ಘಟನೆ ಕುರಿತು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರು ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ. "ಕಿರಿಮಂಜೇಶ್ವರ ಗ್ರಾಮದ ಕೊಡೇರಿ ಹೊಸಹಿತ್ಲುವಿನಲ್ಲಿ ಸಮುದ್ರದಲ್ಲಿ ಈಜಲು ತೆರಳಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ಬಾಲಕರು ದುರ್ಮರಣ ಹೊಂದಿದ ಸುದ್ದಿ ಕೇಳಿ ತುಂಬಾ ವಿಷಾದವಾಗಿದೆ. ಅಮೂಲ್ಯವಾದ ಬಾಲಜೀವಗಳು ಹೀಗೆ ಅಕಾಲದಲ್ಲಿ ಕಳೆದುಹೋಗಿರುವುದು ಅತೀವ ಬೇಸರದ ವಿಷಯ," ಎಂದು ಅವರು ಸಂತಾಪ ಸೂಚಿಸಿದ್ದಾರೆ.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿರುವ ಅವರು, ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳನ್ನು ತಿಳಿಸುತ್ತೇನೆ. ಈ ದುಃಖದ ಸಂದರ್ಭದಲ್ಲಿ ದೇವರು ಕುಟುಂಬದವರಿಗೆ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ನಮ್ಮ WhatsApp ಗ್ರೂಪ್ ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ

No comments:

Post a Comment

Advertisement

ಜಾಹೀರಾತು ಹಾಗೂ ಸುದ್ದಿ ನೀಡಲು ಸಂಪರ್ಕಿಸಿ

📞 9110857339 ಗೆ ಕರೆ ಮಾಡಿ 💬 WhatsApp ಗ್ರೂಪ್ ಸೇರಿ 🎥 YouTube ಚಂದಾದಾರರಾಗಿ

ಕನ್ನಡ ಗ್ಲೋಬಲ್ ನ್ಯೂಸ್