ಹೊಸನಗರದ ಪಟಗುಪ್ಪ ಬಳಿ ಅನಾಮಿಕ ಶವ ಪತ್ತೆ; ಅಗ್ನಿಶಾಮಕ ದಳದಿಂದ ಮೃತದೇಹ ತೆರವು - Kannada global

Breaking

Add

ಶುಕ್ರವಾರ, ಫೆಬ್ರವರಿ 20, 2026

ಹೊಸನಗರದ ಪಟಗುಪ್ಪ ಬಳಿ ಅನಾಮಿಕ ಶವ ಪತ್ತೆ; ಅಗ್ನಿಶಾಮಕ ದಳದಿಂದ ಮೃತದೇಹ ತೆರವು


ಹೊಸನಗರ: ತಾಲೂಕಿನ ಪಟಗುಪ್ಪ ಗ್ರಾಮದ ಸಮೀಪದ ಪ್ರದೇಶವೊಂದರಲ್ಲಿ ಅನಾಮಿಕ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು, ಇಂದು ಪೊಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ.

ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಗಮನಿಸಿದಾಗ ಅನಾಮಿಕ ಶವವೊಂದು ಪತ್ತೆಯಾಗಿದೆ. ತಕ್ಷಣವೇ ಸಾರ್ವಜನಿಕರು ಹೊಸನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು, ಶವವು ನೀರಿನ ಹೊಂಡದಲ್ಲಿ ಇದ್ದಿದ್ದರಿಂದ ಅಗ್ನಿಶಾಮಕ ದಳದ ಸಹಾಯ ಕೋರಿದರು.

ಇಂದು ಮಧ್ಯಾಹ್ನ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ಶವವನ್ನು ಸುರಕ್ಷಿತವಾಗಿ ಮೇಲಕ್ಕೆತ್ತಿದ್ದಾರೆ. ಶವವು ಸಂಪೂರ್ಣವಾಗಿ ಕೊಳೆತ ಸ್ಥಿತಿಯಲ್ಲಿದ್ದು, ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.

ಸ್ಥಳಕ್ಕೆ ಭೇಟಿ ನೀಡಿದ ಹೊಸನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ನಾಪತ್ತೆಯಾದವರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದು, ಮೃತರ ಗುರುತು ಪತ್ತೆ ಹಚ್ಚುವ ಕಾರ್ಯ ಮುಂದುವರಿದಿದೆ


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

Advertisement

ಜಾಹೀರಾತು ಹಾಗೂ ಸುದ್ದಿ ನೀಡಲು ಸಂಪರ್ಕಿಸಿ

📞 9110857339 ಗೆ ಕರೆ ಮಾಡಿ 💬 WhatsApp ಗ್ರೂಪ್ ಸೇರಿ 🎥 YouTube ಚಂದಾದಾರರಾಗಿ

ಕನ್ನಡ ಗ್ಲೋಬಲ್ ನ್ಯೂಸ್