ಒಂದು ಕೋಟಿ ವೆಚ್ಚದ ಕಾಮಗಾರಿ ಪ್ರಗತಿಯಲ್ಲಿದೆ. - Kannada global

Breaking

Friday, February 27, 2026

ಒಂದು ಕೋಟಿ ವೆಚ್ಚದ ಕಾಮಗಾರಿ ಪ್ರಗತಿಯಲ್ಲಿದೆ.


ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ಗುಳ್ಳೆಕೊಪ್ಪದಿಂದ ಹೆಬೈಲ್ ಸಂಪರ್ಕಿಸುವ ರಸ್ತೆ ಕಾಮಗಾರಿ ಕಳೆದ ಒಂದು ತಿಂಗಳಿನಿಂದ ಅರ್ಧಕ್ಕೆ ನಿಂತಿದೆಸ್ಥಳೀಯ ನಿವಾಸಿಗಳು ಮತ್ತು ವಾಹನ ಸವಾರರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ.

 ಸುಮಾರು 1 ಕೋಟಿ ರೂಪಾಯಿ ವೆಚ್ಚದ ಈ ಯೋಜನೆಯು ಸುಗಮ ಸಂಚಾರಕ್ಕಾಗಿ ಆರಂಭಗೊಂಡಿತ್ತು. ಕಾಮಗಾರಿ ಆರಂಭವಾಗಿ ತಿಂಗಳು ಕಳೆದರೂ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ರಸ್ತೆಯುದ್ದಕ್ಕೂ ಮಣ್ಣು ಮತ್ತು ಜಲ್ಲಿಕಲ್ಲುಗಳು ಹರಡಿಕೊಂಡಿವೆ. ಈ ರಸ್ತೆಯು ಪ್ರಮುಖ ಸಂಪರ್ಕ ಕೊಂಡಿಯಾಗಿದ್ದು, ಕೆಲಸ ಅರ್ಧಕ್ಕೆ ನಿಂತಿರುವುದರಿಂದ ಶಾಲಾ ಮಕ್ಕಳು, ವೃದ್ಧರು ಮತ್ತು ತುರ್ತು ಚಿಕಿತ್ಸೆಗೆ ತೆರಳುವ ರೋಗಿಗಳು ಓಡಾಡಲು ಹರಸಾಹಸ ಪಡುತ್ತಿದ್ದಾರೆ.

ಸ್ಥಳೀಯರ ಆಳಲು:

​"ಒಂದು ಕಿಲೋಮೀಟರ್ ರಸ್ತೆಗೆ ತಿಂಗಳುಗಟ್ಟಲೆ ಸಮಯ ತೆಗೆದುಕೊಳ್ಳುತ್ತಿರುವುದು ಆಡಳಿತ ಯಂತ್ರದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ. ಧೂಳಿನ ಸಮಸ್ಯೆಯಿಂದ ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ಜನಪ್ರತಿನಿಧಿಗಳು ಈ ಬಗ್ಗೆ ಶೀಘ್ರ ಗಮನಹರಿಸಬೇಕು" ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.


ಕನ್ನಡ ಗ್ಲೋಬಲ್ ಯೂಟ್ಯೂಬ್ ಚಾನಲ್ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ whatsapp ಗ್ರೂಪ್ ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ

ಜಾಹೀರಾತು ಹಾಗೂ ಸುದ್ದಿ ನೀಡಲು ಸಂಪರ್ಕಿಸಿ - 91108 57339

No comments:

Post a Comment

Advertisement

ಜಾಹೀರಾತು ಹಾಗೂ ಸುದ್ದಿ ನೀಡಲು ಸಂಪರ್ಕಿಸಿ

📞 9110857339 ಗೆ ಕರೆ ಮಾಡಿ 💬 WhatsApp ಗ್ರೂಪ್ ಸೇರಿ 🎥 YouTube ಚಂದಾದಾರರಾಗಿ

ಕನ್ನಡ ಗ್ಲೋಬಲ್ ನ್ಯೂಸ್