ಸಾಗರ: ಇಂದು ಮಧ್ಯಾಹ್ನ ಸಾಗರದಲ್ಲಿ ನಡೆದ ದುರದೃಷ್ಟಕರ ಘಟನೆಯಲ್ಲಿ 26 ವರ್ಷದ ನಿತಿನ್ ಎಂಬ ಯುವಕ ಮೃತಪಟ್ಟಿದ್ದಾರೆ.
ಮೈಸೂರಿನಿಂದ ತಾಳಗುಪ್ಪದ ಕಡೆಗೆ ತೆರಳುತ್ತಿದ್ದ ರೈಲಿಗೆ ತಲೆಕೊಟ್ಟು ನಿತಿನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಸ್ಥಳೀಯ ನಿವಾಸಿಗಳ ಪ್ರಕಾರ, ಈ ಘಟನೆ ನಡೆದ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.
ಯುವಕನ ಸಾವಿಗೆ ನಿಖರ ಕಾರಣ ಏನೆಂಬುದು ತನಿಖೆಯ ನಂತರವಷ್ಟೇ ತಿಳಿಯಬೇಕಿದೆ.
ಒಂದು ಮನವಿ: ಜೀವನದಲ್ಲಿ ಎಂತಹ ದೊಡ್ಡ ಕಷ್ಟಗಳಿದ್ದರೂ ಅವುಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ಪ್ರತಿಯೊಬ್ಬರೂ ಧೈರ್ಯದಿಂದ ಬದುಕಿ, ಕಷ್ಟಗಳನ್ನು ಹಂಚಿಕೊಳ್ಳಿ. ಆತ್ಮಹತ್ಯೆಯಂತಹ ತೀವ್ರ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ.
ಕನ್ನಡ ಗ್ಲೋಬಲ್ ಯೂಟ್ಯೂಬ್ ಚಾನೆಲ್ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
ಕನ್ನಡ ಗ್ಲೋಬಲ್ ವಾಟ್ಸಾಪ್ ಗ್ರೂಪ್ ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ
ಜಾಹೀರಾತು ಹಾಗೂ ಸುದ್ದಿ ನೀಡಲು ಸಂಪರ್ಕಿಸಿ - 9110857339

No comments:
Post a Comment