ಶನಿವಾರ, ಸೆಪ್ಟೆಂಬರ್ 12, 2026
Home
ಜಿಲ್ಲಾ ಸುದ್ದಿ
ಶಿವಮೊಗ್ಗ: ಅರಣ್ಯ ಸಂಚಾರಿ ದಳದ ದಿಢೀರ್ ದಾಳಿ – ಅಕ್ರಮವಾಗಿ ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ
ಶಿವಮೊಗ್ಗ: ಅರಣ್ಯ ಸಂಚಾರಿ ದಳದ ದಿಢೀರ್ ದಾಳಿ – ಅಕ್ರಮವಾಗಿ ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ
ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲ್ಲೂಕಿನ ನೆವಟೂರು ಸಮೀಪದ ಅನೆಕೆರೆ ಗ್ರಾಮದಲ್ಲಿ ವನ್ಯಜೀವಿಗಳಿಗೆ ಸಂಬಂಧಿಸಿದಂತೆ ನಡೆಯುತ್ತಿದ್ದ ಅಕ್ರಮ ದಂಧೆಯೊಂದನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಅನೆಕೆರೆ ಭಾಗದಲ್ಲಿ ಜಿಂಕೆ ಮಾಂಸವನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಪಡೆದ ಅಧಿಕಾರಿಗಳು, ಸ್ಥಳದ ಮೇಲೆ ದಿಢೀರ್ ದಾಳಿ ನಡೆಸಿ ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಕಾರ್ಯಾಚರಣೆಯ ವಿವರ:
ಪಿಎಸ್ಐ ವಿನಾಯಕ ಕೆ. ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ವಿಶೇಷ ತಂಡವು ಈ ಕಾರ್ಯಾಚರಣೆ ನಡೆಸಿದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘಿಸಿ ಈ ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿದ್ದ ನೆವಟೂರು ಅನೆಕೆರೆ ನಿವಾಸಿಗಳಾದ ನಿಂಗಪ್ಪ ಹಾಗೂ ರಾಮಪ್ಪ ಎಂಬುವರನ್ನು ಪೊಲೀಸರು ಸ್ಥಳದಲ್ಲೇ ಬಂಧಿಸಿದ್ದಾರೆ. ದಾಳಿಯ ವೇಳೆ ಆರೋಪಿಗಳ ಬಳಿ ಅಕ್ರಮವಾಗಿ ಮಾರಾಟ ಮಾಡಲು ಸಿದ್ಧಪಡಿಸಲಾಗಿದ್ದ ಸುಮಾರು 34.945 ಕೆ.ಜಿ ತೂಕದ ಜಿಂಕೆ ದೇಹದ ಭಾಗಗಳು ಹಾಗೂ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ.
ಈ ಯಶಸ್ಸು ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಆಂಜನೇಯ ಪಾಟೀಲ್, ಗಣೇಶ್, ಚಂದ್ರಕಾಂತ ಹಾಗೂ ಮಹೇಶ್ ಸಕ್ರಿಯವಾಗಿ ಪಾಲ್ಗೊಂಡಿದ್ದರು. ಅಲ್ಲದೆ, ಅಕ್ರಮ ಮಾಂಸ ಮಾರಾಟ ಜಾಲದ ಬಗ್ಗೆ ನಿಖರ ಮಾಹಿತಿ ನೀಡಿ ಪತ್ತೆಹಚ್ಚಲು ಮಹೇಶ್, ದೊಡ್ಡಮನಿ ಹಾಗೂ ಪ್ರಮೋದಿನಿ ಅವರು ವಿಶೇಷ ಸಹಕಾರವನ್ನು ಒದಗಿಸಿದ್ದಾರೆ.
ಶಾಸಕ ಆರಗ ಜ್ಞಾನೇಂದ್ರ ಆಕ್ರೋಶ ಹಾಗೂ ಆಗ್ರಹ:
ಇದೇ ಸಂದರ್ಭದಲ್ಲಿ ಮಾತನಾಡಿದ ತೀರ್ಥಹಳ್ಳಿ ಕ್ಷೇತ್ರದ ಮಾಜಿ ಸಚಿವರು ಹಾಗೂ ಸ್ಥಳೀಯ ಶಾಸಕರಾದ ಆರಗ ಜ್ಞಾನೇಂದ್ರ ಅವರು, ಇಂತಹ ಗಂಭೀರ ಅಪರಾಧ ಪ್ರಕರಣಗಳಲ್ಲಿ ಕೇವಲ ಸಾಧಾರಣ ಸೆಕ್ಷನ್ಗಳಡಿ ಪ್ರಕರಣ ದಾಖಲಿಸುತ್ತಿರುವುದರಿಂದ ಆರೋಪಿಗಳು ಸುಲಭವಾಗಿ ಜಾಮೀನು ಪಡೆದು ಕಾನೂನಿನ ಕಣ್ಣಿಗೆ ಮಣ್ಣು ಎರಚುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ತಮ್ಮ ಗೃಹ ಸಚಿವರ ಅವಧಿಯಲ್ಲಿ ಜಾರಿಗೆ ತಂದಿದ್ದ ಕಠಿಣ ಗೋವಧೆ ನಿಷೇಧ ಕಾಯ್ದೆಯ ಮಾದರಿಯಲ್ಲೇ ವನ್ಯಜೀವಿ ಅಪರಾಧಗಳಿಗೂ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಇಂತಹ ಅಕ್ರಮ ಚಟುವಟಿಕೆಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಕೈಗೊಳ್ಳುವಂತೆ ಈಗಾಗಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಐಜಿ ಅವರೊಂದಿಗೆ ಚರ್ಚಿಸಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.
Tags
# ಜಿಲ್ಲಾ ಸುದ್ದಿ
Share This
About Kannada Global
ಜಿಲ್ಲಾ ಸುದ್ದಿ
Tags
ಜಿಲ್ಲಾ ಸುದ್ದಿ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Advertisement
ಜಾಹೀರಾತು ಹಾಗೂ ಸುದ್ದಿ ನೀಡಲು ಸಂಪರ್ಕಿಸಿ
📞 9110857339 ಗೆ ಕರೆ ಮಾಡಿ 💬 WhatsApp ಗ್ರೂಪ್ ಸೇರಿ 🎥 YouTube ಚಂದಾದಾರರಾಗಿಕನ್ನಡ ಗ್ಲೋಬಲ್ ನ್ಯೂಸ್
Author Details
"ಚರಣ್ - ಸಂಸ್ಥಾಪಕರು, ಕನ್ನಡ ಗ್ಲೋಬಲ್. ನಿಖರ ಸುದ್ದಿ, ನೇರ ಮಾತು ಹಾಗೂ ಸಮಾಜದ ಹಿತದೃಷ್ಟಿಯಿಂದ ಸುದ್ದಿಗಳ ವಿಶ್ಲೇಷಣೆ. ಸ್ಥಳೀಯ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಡಿಜಿಟಲ್ ಮಾಧ್ಯಮದ ಪಥದಲ್ಲಿ ನನ್ನ ಪಯಣ."
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ