ಶುಕ್ರವಾರ, ಸೆಪ್ಟೆಂಬರ್ 11, 2026
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಎಚ್.ಸಿ. ಯೋಗೇಶ್ ನೇಮಕ: ಹೈಕಮಾಂಡ್ ಆದೇಶ
ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ ಎಚ್.ಸಿ. ಯೋಗೇಶ್ ಅವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಅಧಿಕೃತವಾಗಿ ನೇಮಕ ಮಾಡಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಈ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದ್ದು, 2023ರ ಚುನಾವಣೆಯ ಅಭ್ಯರ್ಥಿಯಾಗಿದ್ದ ಹಾಗೂ ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಎಚ್.ಸಿ. ಯೋಗೇಶ್ ಅವರನ್ನು ಈ ಹುದ್ದೆಗೆ ನೇಮಿಸಿ ತಕ್ಷಣವೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದ್ದಾರೆ.
ತೀವ್ರ ಪೈಪೋಟಿ ನಡುವೆಯೂ ಒಮ್ಮತದ ಆಯ್ಕೆ:
ಈ ಬಾರಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಎಂದಿಗಿಂತಲೂ ಹೆಚ್ಚಿನ ಪೈಪೋಟಿ ಹಾಗೂ ಆಕಾಂಕ್ಷಿಗಳ ಒಲವಿತ್ತು. ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಮಾಜಿ ಸಂಸದ ಆಯನೂರು ಮಂಜುನಾಥ್, ಶಿವಮೊಗ್ಗ ನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎಸ್. ಸುಂದರೇಶ್, ಪ್ರಾಧಿಕಾರದ ಮಾಜಿ ಅಧ್ಯಕ್ಷ ಎನ್. ರಮೇಶ್, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಮಹಾನಗರ ಪಾಲಿಕೆಯ ಮಾಜಿ ಉಪ ಮೇಯರ್ ಹಾಗೂ ಜಿಲ್ಲಾ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ವಿಜಯಲಕ್ಷ್ಮಿ ಪಾಟೀಲ್ ಸೇರಿದಂತೆ ಅನೇಕ ಪ್ರಮುಖ ಮುಖಂಡರು ರೇಸ್ನಲ್ಲಿದ್ದರು.
ಸಂಘಟನ್ ಸೃಜನ್ ಅಭಿಯಾನದ ಭಾಗ:
ಎಐಸಿಸಿ ವೀಕ್ಷಕರಾಗಿ ಶಿವಮೊಗ್ಗಕ್ಕೆ ಆಗಮಿಸಿದ್ದ ಶರತ್ ಅವರು ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಂದ ಪ್ರತ್ಯೇಕ ಅಭಿಪ್ರಾಯ ಸಂಗ್ರಹಿಸಿದ್ದರು. ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗಬಲ್ಲ ನಾಯಕನ ಆಯ್ಕೆಗಾಗಿ ತಳಮಟ್ಟದ ಕಾರ್ಯಕರ್ತರ ಅಭಿಪ್ರಾಯದ ಆಧಾರದ ಮೇಲೆ ಒಟ್ಟು 6 ಮಂದಿಯ ಸಂಭಾವ್ಯರ ಹೆಸರನ್ನು ಹೈಕಮಾಂಡ್ಗೆ ಶಿಫಾರಸು ಮಾಡಲಾಗಿತ್ತು. ಪ್ರಸ್ತುತ ಈ ಬಾರಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ನೇಮಕವನ್ನು 'ಸಂಘಟನ್ ಸೃಜನ್' ಅಭಿಯಾನದ ಒಂದು ಭಾಗವಾಗಿ ಕೈಗೊಳ್ಳಲಾಗಿದೆ ಎಂದು ಎಐಸಿಸಿ ಸ್ಪಷ್ಟಪಡಿಸಿದೆ.
Tags
# ಶಿವಮೊಗ್ಗ
Share This
About Kannada Global
ಶಿವಮೊಗ್ಗ
Tags
ಶಿವಮೊಗ್ಗ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Advertisement
ಜಾಹೀರಾತು ಹಾಗೂ ಸುದ್ದಿ ನೀಡಲು ಸಂಪರ್ಕಿಸಿ
📞 9110857339 ಗೆ ಕರೆ ಮಾಡಿ 💬 WhatsApp ಗ್ರೂಪ್ ಸೇರಿ 🎥 YouTube ಚಂದಾದಾರರಾಗಿಕನ್ನಡ ಗ್ಲೋಬಲ್ ನ್ಯೂಸ್
Author Details
"ಚರಣ್ - ಸಂಸ್ಥಾಪಕರು, ಕನ್ನಡ ಗ್ಲೋಬಲ್. ನಿಖರ ಸುದ್ದಿ, ನೇರ ಮಾತು ಹಾಗೂ ಸಮಾಜದ ಹಿತದೃಷ್ಟಿಯಿಂದ ಸುದ್ದಿಗಳ ವಿಶ್ಲೇಷಣೆ. ಸ್ಥಳೀಯ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಡಿಜಿಟಲ್ ಮಾಧ್ಯಮದ ಪಥದಲ್ಲಿ ನನ್ನ ಪಯಣ."
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ